Home Bibles ನಿರ್ಗಮಕಾಂಡ 29:13 · ಕನ್ನಡ ಬೈಬಲ್
ನಿರ್ಗಮಕಾಂಡ 29:13 · ಕನ್ನಡ ಬೈಬಲ್

ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.

Cross references

ನಿರ್ಗಮಕಾಂಡ 29:18

ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.

ನಿರ್ಗಮಕಾಂಡ 29:22

ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.

ನಿರ್ಗಮಕಾಂಡ 29:25

ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.

ಲೇವ್ಯಕಾಂಡ 1:9

ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.

ಲೇವ್ಯಕಾಂಡ 1:15

ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.

ಲೇವ್ಯಕಾಂಡ 3:3

ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

ಲೇವ್ಯಕಾಂಡ 3:9

ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

ಲೇವ್ಯಕಾಂಡ 3:14

ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

ಲೇವ್ಯಕಾಂಡ 4:8

ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

ಲೇವ್ಯಕಾಂಡ 4:26

ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 4:31

ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 4:35

ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 6:12

ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.

ಲೇವ್ಯಕಾಂಡ 7:3

ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ

ಲೇವ್ಯಕಾಂಡ 7:31

ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.

ಲೇವ್ಯಕಾಂಡ 8:16

ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.

ಲೇವ್ಯಕಾಂಡ 8:25

ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.

ಲೇವ್ಯಕಾಂಡ 9:10

ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.

ಲೇವ್ಯಕಾಂಡ 9:19

ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ

ಲೇವ್ಯಕಾಂಡ 16:25

ಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.

ಲೇವ್ಯಕಾಂಡ 17:6

ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.

ಅಂಕೆಗಳ ಪುಸ್ತಕ 18:17

ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.

1 ಸಮುವೇಲ 2:16

ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.

ಕೀರ್ತನೆಗಳು 22:14

ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.

ಯೆಶಾಯ 1:11

ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.

ಯೆಶಾಯ 34:6

ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.

ಯೆಶಾಯ 43:24

ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.

Interlinear

Choose Theme