ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
Cross references
ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ
ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;
ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.
ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.
ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;