ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
Cross references
ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು.
ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;
ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.
ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?