Home Bibles ನಿರ್ಗಮಕಾಂಡ 30:14 · ಕನ್ನಡ ಬೈಬಲ್
ನಿರ್ಗಮಕಾಂಡ 30:14 · ಕನ್ನಡ ಬೈಬಲ್

ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.

Cross references

ಅಂಕೆಗಳ ಪುಸ್ತಕ 1:3

ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.

ಅಂಕೆಗಳ ಪುಸ್ತಕ 1:18

ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.

ಅಂಕೆಗಳ ಪುಸ್ತಕ 1:20

ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು

ಅಂಕೆಗಳ ಪುಸ್ತಕ 14:29

ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.

ಅಂಕೆಗಳ ಪುಸ್ತಕ 26:2

ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.

ಅಂಕೆಗಳ ಪುಸ್ತಕ 32:11

ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ

ಯೆಹೆಜ್ಕೇಲ 45:12

ಶೇಕೆಲ್‌ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.

ಯೆಹೆಜ್ಕೇಲ 45:16

ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು.

Interlinear

Choose Theme