Cross references
ನಿರ್ಗಮಕಾಂಡ 38:1
ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
ನಿರ್ಗಮಕಾಂಡ 38:8
ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
1 ಅರಸುಗಳು 7:23
ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.
1 ಅರಸುಗಳು 7:38
ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.