ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
Cross references
ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ.
ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.