Home Bibles ☰ Books ನಿರ್ಗಮಕಾಂಡ 30:8 · ಕನ್ನಡ ಬೈಬಲ್
ನಿರ್ಗಮಕಾಂಡ 30:8 · ಕನ್ನಡ ಬೈಬಲ್

ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.

Cross references

ನಿರ್ಗಮಕಾಂಡ 12:6

ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.

ನಿರ್ಗಮಕಾಂಡ 25:37

ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.

ರೋಮಾಪುರದವರಿಗೆ 8:34

ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;

1 ತೆಸಲೋನಿಕದವರಿಗೆ 5:17

ಎಡೆಬಿಡದೆ ಪ್ರಾರ್ಥನೆ ಮಾಡಿರಿ.

ಹೆಬ್ರಿಯರಿಗೆ 7:25

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.

ಹೆಬ್ರಿಯರಿಗೆ 9:24

ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.

Interlinear

Choose Theme