ನಿರ್ಗಮಕಾಂಡ 31:16 · ಕನ್ನಡ ಬೈಬಲ್
ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
Cross references
ಆದಿಕಾಂಡ 9:13
ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
ಆದಿಕಾಂಡ 17:11
ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
ನೆಹೆಮ್ಯ 13:15
ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
ಯೆರೆಮಿಯ 50:5
ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.