Home Bibles ☰ Books ನಿರ್ಗಮಕಾಂಡ 31:17 · ಕನ್ನಡ ಬೈಬಲ್
ನಿರ್ಗಮಕಾಂಡ 31:17 · ಕನ್ನಡ ಬೈಬಲ್

ನನಗೂ ಇಸ್ರಾಯೇಲ್‌ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.

Cross references

ಆದಿಕಾಂಡ 1:31

ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

ಆದಿಕಾಂಡ 2:2

ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.

ನಿರ್ಗಮಕಾಂಡ 31:13

ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.

ಯೋಬ 38:7

ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.

ಕೀರ್ತನೆಗಳು 104:31

ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ.

ಯೆಹೆಜ್ಕೇಲ 20:12

ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್‌ ದಿನಗಳನ್ನು ನಾನು ಅವರಿಗೆ ಕೊಟ್ಟೆನು.

ಯೆಹೆಜ್ಕೇಲ 20:20

ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.

ಹೆಬ್ರಿಯರಿಗೆ 4:3

ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.

ಹೆಬ್ರಿಯರಿಗೆ 4:10

ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.

Interlinear

Choose Theme