Home Bibles ☰ Books ನಿರ್ಗಮಕಾಂಡ 32:2 · ಕನ್ನಡ ಬೈಬಲ್
ನಿರ್ಗಮಕಾಂಡ 32:2 · ಕನ್ನಡ ಬೈಬಲ್

ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.

Cross references

ಆದಿಕಾಂಡ 24:22

ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್‌ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್‌ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.

ಆದಿಕಾಂಡ 24:47

ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು

ನಿರ್ಗಮಕಾಂಡ 12:35

ಮೋಶೆಯು ಹೇಳಿದಂತೆ ಇಸ್ರಾ ಯೇಲ್‌ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.

ನಿರ್ಗಮಕಾಂಡ 35:22

ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.

ನ್ಯಾಯಾಧಿಪತಿಗಳು 8:24

ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).

ಯೆಶಾಯ 3:19

ಸರ, ಬಳೆ, ಮುಂಡಾಸ,

ಯೆಹೆಜ್ಕೇಲ 16:11

ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.

ಯೆಹೆಜ್ಕೇಲ 16:17

ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.

ಹೊಶೇಯ 2:8

ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.

Interlinear

Choose Theme