Home Bibles ☰ Books ನಿರ್ಗಮಕಾಂಡ 32:23 · ಕನ್ನಡ ಬೈಬಲ್
ನಿರ್ಗಮಕಾಂಡ 32:23 · ಕನ್ನಡ ಬೈಬಲ್

ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.

Cross references

ನಿರ್ಗಮಕಾಂಡ 32:1

ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.

ನಿರ್ಗಮಕಾಂಡ 32:8

ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.

Interlinear

Choose Theme