ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
Cross references
ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ
ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.