Home Bibles ನಿರ್ಗಮಕಾಂಡ 34:17 · ಕನ್ನಡ ಬೈಬಲ್
ನಿರ್ಗಮಕಾಂಡ 34:17 · ಕನ್ನಡ ಬೈಬಲ್

ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.

Cross references

ನಿರ್ಗಮಕಾಂಡ 20:4

ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.

ನಿರ್ಗಮಕಾಂಡ 23:14

ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.

ನಿರ್ಗಮಕಾಂಡ 32:8

ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.

ಲೇವ್ಯಕಾಂಡ 19:4

ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.

ಯೆಶಾಯ 46:6

ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.

ಯೆರೆಮಿಯ 10:14

ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.

ಅಪೋಸ್ತಲರ ಕೃತ್ಯಗಳು 17:29

ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.

ಅಪೋಸ್ತಲರ ಕೃತ್ಯಗಳು 19:26

ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ

Interlinear

Choose Theme