ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
Cross references
ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.