ನಿರ್ಗಮಕಾಂಡ 35:23 · ಕನ್ನಡ ಬೈಬಲ್
ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.
Cross references
ನಿರ್ಗಮಕಾಂಡ 25:2
ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.
ನಿರ್ಗಮಕಾಂಡ 35:6
ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು,
1 ದಿನವೃತ್ತಾಂತ 29:8
ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.