Home Bibles ನಿರ್ಗಮಕಾಂಡ 35:25 · ಕನ್ನಡ ಬೈಬಲ್
ನಿರ್ಗಮಕಾಂಡ 35:25 · ಕನ್ನಡ ಬೈಬಲ್

ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.

Cross references

ನಿರ್ಗಮಕಾಂಡ 28:3

ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.

ನಿರ್ಗಮಕಾಂಡ 31:6

ನಾನು ಇಗೋ, ನಾನೇ ಅವನೊಂದಿಗೆ ದಾನ್‌ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.

ನಿರ್ಗಮಕಾಂಡ 36:1

ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು.

2 ಅರಸುಗಳು 23:7

ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.

ಸಾಮೇತಿಗಳು 14:1

ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.

ಸಾಮೇತಿಗಳು 31:19

ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.

ಲೂಕ 8:2

ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ

ಅಪೋಸ್ತಲರ ಕೃತ್ಯಗಳು 9:39

ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ

ರೋಮಾಪುರದವರಿಗೆ 16:1

ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.

ರೋಮಾಪುರದವರಿಗೆ 16:6

ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.

ರೋಮಾಪುರದವರಿಗೆ 16:12

ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.

ಗಲಾತ್ಯದವರಿಗೆ 3:28

ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

ಫಿಲಿಪ್ಪಿಯವರಿಗೆ 4:3

ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್‌ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.

Interlinear

Choose Theme