ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು.
Cross references
ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.