Home Bibles ☰ Books ನಿರ್ಗಮಕಾಂಡ 38:22 · ಕನ್ನಡ ಬೈಬಲ್
ನಿರ್ಗಮಕಾಂಡ 38:22 · ಕನ್ನಡ ಬೈಬಲ್

ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.

Cross references

ನಿರ್ಗಮಕಾಂಡ 31:1

ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ--

ನಿರ್ಗಮಕಾಂಡ 31:2

ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.

ನಿರ್ಗಮಕಾಂಡ 35:30

ಆಗ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು

1 ದಿನವೃತ್ತಾಂತ 2:20

ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು.

ಕೀರ್ತನೆಗಳು 119:6

ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.

ಯೆರೆಮಿಯ 1:7

ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.

ಮತ್ತಾಯ 28:20

ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

Interlinear

Choose Theme