Home Bibles ☰ Books ನಿರ್ಗಮಕಾಂಡ 38:30 · ಕನ್ನಡ ಬೈಬಲ್
ನಿರ್ಗಮಕಾಂಡ 38:30 · ಕನ್ನಡ ಬೈಬಲ್

ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.

Cross references

ನಿರ್ಗಮಕಾಂಡ 26:37

ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.

ನಿರ್ಗಮಕಾಂಡ 27:2

ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.

ನಿರ್ಗಮಕಾಂಡ 27:10

ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.

ನಿರ್ಗಮಕಾಂಡ 27:17

ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು.

Interlinear

Choose Theme