Home Bibles ನಿರ್ಗಮಕಾಂಡ 4:28 · ಕನ್ನಡ ಬೈಬಲ್
ನಿರ್ಗಮಕಾಂಡ 4:28 · ಕನ್ನಡ ಬೈಬಲ್

ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.

Cross references

ನಿರ್ಗಮಕಾಂಡ 3:5

ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.

ನಿರ್ಗಮಕಾಂಡ 4:8

ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.

ನಿರ್ಗಮಕಾಂಡ 4:15

ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.

ನಿರ್ಗಮಕಾಂಡ 19:7

ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.

ಅಂಕೆಗಳ ಪುಸ್ತಕ 30:1

ಮೋಶೆಯು ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಯಜಮಾನರ ಸಂಗಡ ಮಾತನಾಡಿ -- ಕರ್ತನು ಆಜ್ಞಾಪಿಸಿದ್ದೇನಂದರೆ,

ಯೋನ 3:2

ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.

ಮತ್ತಾಯ 21:29

ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.

Interlinear

Choose Theme