Home Bibles ನಿರ್ಗಮಕಾಂಡ 4:5 · ಕನ್ನಡ ಬೈಬಲ್
ನಿರ್ಗಮಕಾಂಡ 4:5 · ಕನ್ನಡ ಬೈಬಲ್

ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.

Cross references

ಆದಿಕಾಂಡ 12:7

ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.

ಆದಿಕಾಂಡ 17:1

ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.

ಆದಿಕಾಂಡ 18:1

ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.

ಆದಿಕಾಂಡ 26:2

ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.

ಆದಿಕಾಂಡ 48:3

ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್‌ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.

ನಿರ್ಗಮಕಾಂಡ 3:6

ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.

ನಿರ್ಗಮಕಾಂಡ 3:15

ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.

ನಿರ್ಗಮಕಾಂಡ 3:16

ಆತನು--ನೀನು ಹೋಗಿ ಇಸ್ರಾಯೇಲ್‌ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.

ನಿರ್ಗಮಕಾಂಡ 3:18

ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್‌ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.

ನಿರ್ಗಮಕಾಂಡ 4:1

ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.

ನಿರ್ಗಮಕಾಂಡ 4:31

ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

ನಿರ್ಗಮಕಾಂಡ 19:9

ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.

2 ದಿನವೃತ್ತಾಂತ 20:20

ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.

ಯೆಶಾಯ 7:9

ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.

ಯೆರೆಮಿಯ 31:3

ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;

ಯೋಹಾನ 5:36

ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಯೋಹಾನ 11:15

ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.

ಯೋಹಾನ 11:42

ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.

ಯೋಹಾನ 20:27

ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.

ಯೋಹಾನ 20:31

ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

ಅಪೋಸ್ತಲರ ಕೃತ್ಯಗಳು 7:2

ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--

Interlinear

Choose Theme