Home Bibles ನಿರ್ಗಮಕಾಂಡ 40:38 · ಕನ್ನಡ ಬೈಬಲ್
ನಿರ್ಗಮಕಾಂಡ 40:38 · ಕನ್ನಡ ಬೈಬಲ್

ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.

Cross references

ನಿರ್ಗಮಕಾಂಡ 13:21

ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.

ನಿರ್ಗಮಕಾಂಡ 13:22

ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.

ಅಂಕೆಗಳ ಪುಸ್ತಕ 9:15

ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.

ಅಂಕೆಗಳ ಪುಸ್ತಕ 9:16

ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.

ಅಂಕೆಗಳ ಪುಸ್ತಕ 10:34

ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.

2 ಸಮುವೇಲ 7:6

ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್‌ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.

ಕೀರ್ತನೆಗಳು 78:14

ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.

ಕೀರ್ತನೆಗಳು 105:39

ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.

ಯೆಶಾಯ 4:5

ಕರ್ತನು ಚೀಯೋನ್‌ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.

Interlinear

Choose Theme