ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
Cross references
ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,
ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.
ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.