Home Bibles ನಿರ್ಗಮಕಾಂಡ 6:13 · ಕನ್ನಡ ಬೈಬಲ್
ನಿರ್ಗಮಕಾಂಡ 6:13 · ಕನ್ನಡ ಬೈಬಲ್

ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.

Cross references

ಅಂಕೆಗಳ ಪುಸ್ತಕ 27:19

ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.

ಅಂಕೆಗಳ ಪುಸ್ತಕ 27:23

ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.

ದ್ವಿತೀಯೋಪದೇಶಕಾಂಡ 31:14

ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.

ಕೀರ್ತನೆಗಳು 91:11

ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.

ಮತ್ತಾಯ 4:6

ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ

1 ತಿಮೋಥೆಯ 1:18

ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.

1 ತಿಮೋಥೆಯ 5:21

ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.

1 ತಿಮೋಥೆಯ 6:13

ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

1 ತಿಮೋಥೆಯ 6:17

ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

2 ತಿಮೋಥೆಯ 2:4

ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.

2 ತಿಮೋಥೆಯ 4:1

ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

Interlinear

Choose Theme