ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು.
Cross references
ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು.
ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ;
ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.
ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.
ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು.
ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು.
ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು.
ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.