Home Bibles ನಿರ್ಗಮಕಾಂಡ 6:29 · ಕನ್ನಡ ಬೈಬಲ್
ನಿರ್ಗಮಕಾಂಡ 6:29 · ಕನ್ನಡ ಬೈಬಲ್

ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.

Cross references

ನಿರ್ಗಮಕಾಂಡ 6:2

ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು;

ನಿರ್ಗಮಕಾಂಡ 6:6

ಆದದರಿಂದ ಇಸ್ರಾ ಯೇಲ್‌ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ

ನಿರ್ಗಮಕಾಂಡ 6:8

ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.

ನಿರ್ಗಮಕಾಂಡ 6:11

ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು.

ನಿರ್ಗಮಕಾಂಡ 7:2

ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.

ಯೆರೆಮಿಯ 1:7

ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.

ಯೆರೆಮಿಯ 1:17

ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.

ಯೆರೆಮಿಯ 26:2

ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.

ಯೆಹೆಜ್ಕೇಲ 2:6

ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.

ಯೆಹೆಜ್ಕೇಲ 2:7

ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.

ಯೆಹೆಜ್ಕೇಲ 3:11

ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.

ಯೆಹೆಜ್ಕೇಲ 3:17

ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.

ಮತ್ತಾಯ 28:20

ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಅಪೋಸ್ತಲರ ಕೃತ್ಯಗಳು 20:27

ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.

Interlinear

Choose Theme