Home Bibles ನಿರ್ಗಮಕಾಂಡ 7:20 · ಕನ್ನಡ ಬೈಬಲ್
ನಿರ್ಗಮಕಾಂಡ 7:20 · ಕನ್ನಡ ಬೈಬಲ್

ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.

Cross references

ನಿರ್ಗಮಕಾಂಡ 4:9

ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.

ನಿರ್ಗಮಕಾಂಡ 7:6

ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು.

ನಿರ್ಗಮಕಾಂಡ 7:10

ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.

ನಿರ್ಗಮಕಾಂಡ 7:17

ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.

ನಿರ್ಗಮಕಾಂಡ 17:5

ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.

ನಿರ್ಗಮಕಾಂಡ 17:9

ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.

ಅಂಕೆಗಳ ಪುಸ್ತಕ 20:8

ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.

ಕೀರ್ತನೆಗಳು 78:44

ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.

ಕೀರ್ತನೆಗಳು 105:29

ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.

ಯೋಹಾನ 2:9

ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು

ಪ್ರಕಟನೆ 8:8

ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;

Interlinear

Choose Theme