Home Bibles ☰ Books ನಿರ್ಗಮಕಾಂಡ 8:10 · ಕನ್ನಡ ಬೈಬಲ್
ನಿರ್ಗಮಕಾಂಡ 8:10 · ಕನ್ನಡ ಬೈಬಲ್

ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.

Cross references

ನಿರ್ಗಮಕಾಂಡ 9:14

ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.

ನಿರ್ಗಮಕಾಂಡ 9:29

ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.

ನಿರ್ಗಮಕಾಂಡ 15:11

ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?

ದ್ವಿತೀಯೋಪದೇಶಕಾಂಡ 4:35

ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.

ದ್ವಿತೀಯೋಪದೇಶಕಾಂಡ 32:31

ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.

ದ್ವಿತೀಯೋಪದೇಶಕಾಂಡ 33:26

ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.

2 ಸಮುವೇಲ 7:22

ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.

1 ದಿನವೃತ್ತಾಂತ 17:20

ಓ ಕರ್ತನೇ, ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.

ಕೀರ್ತನೆಗಳು 9:16

ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್‌. ಸೆಲಾ.

ಕೀರ್ತನೆಗಳು 83:18

ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.

ಕೀರ್ತನೆಗಳು 86:8

ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.

ಕೀರ್ತನೆಗಳು 89:6

ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?

ಸಾಮೇತಿಗಳು 27:1

ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.

Interlinear

Choose Theme