ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು.
Cross references
ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.
ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.
ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.