ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
Cross references
ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.
ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.