Home Bibles ನಿರ್ಗಮಕಾಂಡ 9:12 · ಕನ್ನಡ ಬೈಬಲ್
ನಿರ್ಗಮಕಾಂಡ 9:12 · ಕನ್ನಡ ಬೈಬಲ್

ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

Cross references

ನಿರ್ಗಮಕಾಂಡ 4:21

ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.

ನಿರ್ಗಮಕಾಂಡ 7:13

ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.

ನಿರ್ಗಮಕಾಂಡ 9:7

ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.

ಕೀರ್ತನೆಗಳು 81:11

ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.

ಪ್ರಕಟನೆ 16:10

ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು

Interlinear

Choose Theme