Home Bibles ನಿರ್ಗಮಕಾಂಡ 9:18 · ಕನ್ನಡ ಬೈಬಲ್
ನಿರ್ಗಮಕಾಂಡ 9:18 · ಕನ್ನಡ ಬೈಬಲ್

ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.

Cross references

ನಿರ್ಗಮಕಾಂಡ 9:22

ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು.

ನಿರ್ಗಮಕಾಂಡ 10:6

ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.

ನಿರ್ಗಮಕಾಂಡ 10:14

ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.

ನಿರ್ಗಮಕಾಂಡ 11:6

ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.

1 ಅರಸುಗಳು 19:2

ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.

1 ಅರಸುಗಳು 20:6

ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.

2 ಅರಸುಗಳು 7:1

ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.

2 ಅರಸುಗಳು 7:18

ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.

ಯೋಬ 38:23

ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ.

ಕೀರ್ತನೆಗಳು 83:15

ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.

Interlinear

Choose Theme