Home Bibles ☰ Books ಯೆಹೆಜ್ಕೇಲ 1:11 · ಕನ್ನಡ ಬೈಬಲ್
ಯೆಹೆಜ್ಕೇಲ 1:11 · ಕನ್ನಡ ಬೈಬಲ್

ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು.

Cross references

ಯೆಶಾಯ 6:2

ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.

ಯೆಹೆಜ್ಕೇಲ 1:23

ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು.

ಯೆಹೆಜ್ಕೇಲ 10:16

ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.

ಯೆಹೆಜ್ಕೇಲ 10:19

ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.

Interlinear

Choose Theme