ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು.
Cross references
ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು.
ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.
ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು.
ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು.
ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.