Home Bibles ☰ Books ಯೆಹೆಜ್ಕೇಲ 1:17 · ಕನ್ನಡ ಬೈಬಲ್
ಯೆಹೆಜ್ಕೇಲ 1:17 · ಕನ್ನಡ ಬೈಬಲ್

ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.

Cross references

ಯೆಶಾಯ 55:11

ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.

ಯೆಹೆಜ್ಕೇಲ 1:9

ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.

ಯೆಹೆಜ್ಕೇಲ 1:12

ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.

ಯೆಹೆಜ್ಕೇಲ 10:1

ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.

Interlinear

Choose Theme