Home Bibles ☰ Books ಯೆಹೆಜ್ಕೇಲ 1:5 · ಕನ್ನಡ ಬೈಬಲ್
ಯೆಹೆಜ್ಕೇಲ 1:5 · ಕನ್ನಡ ಬೈಬಲ್

ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.

Cross references

ಯೆಹೆಜ್ಕೇಲ 1:26

ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.

ಪ್ರಕಟನೆ 4:6

ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

ಪ್ರಕಟನೆ 6:6

ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.

Interlinear

Choose Theme