Home Bibles ಯೆಹೆಜ್ಕೇಲ 1:7 · ಕನ್ನಡ ಬೈಬಲ್
ಯೆಹೆಜ್ಕೇಲ 1:7 · ಕನ್ನಡ ಬೈಬಲ್

ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.

Cross references

ಲೇವ್ಯಕಾಂಡ 11:3

ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು.

ಲೇವ್ಯಕಾಂಡ 11:47

ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.

ಕೀರ್ತನೆಗಳು 104:4

ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.

ಯೆಹೆಜ್ಕೇಲ 1:13

ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.

ದಾನಿಯೇಲ 10:6

ಆತನ ದೇಹವು ತಾರ್ಷೀಷ್‌ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.

ಪ್ರಕಟನೆ 1:15

ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

Interlinear

Choose Theme