Home Bibles ಯೆಹೆಜ್ಕೇಲ 10:14 · ಕನ್ನಡ ಬೈಬಲ್
ಯೆಹೆಜ್ಕೇಲ 10:14 · ಕನ್ನಡ ಬೈಬಲ್

ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.

Cross references

1 ಅರಸುಗಳು 7:29

ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.

1 ಅರಸುಗಳು 7:36

ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.

ಯೆಹೆಜ್ಕೇಲ 1:6

ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.

ಯೆಹೆಜ್ಕೇಲ 10:21

ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್‌ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.

ಯೆಹೆಜ್ಕೇಲ 41:19

ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.

ಪ್ರಕಟನೆ 4:7

ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.

Interlinear

Choose Theme