Home Bibles ಯೆಹೆಜ್ಕೇಲ 12:23 · ಕನ್ನಡ ಬೈಬಲ್
ಯೆಹೆಜ್ಕೇಲ 12:23 · ಕನ್ನಡ ಬೈಬಲ್

ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು.

Cross references

ಕೀರ್ತನೆಗಳು 37:13

ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.

ಯೆಶಾಯ 28:22

ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.

ಯೆಹೆಜ್ಕೇಲ 7:2

ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್‌ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.

ಯೆಹೆಜ್ಕೇಲ 7:5

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು.

ಯೆಹೆಜ್ಕೇಲ 7:6

ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು.

ಯೆಹೆಜ್ಕೇಲ 7:7

ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ.

ಯೆಹೆಜ್ಕೇಲ 7:10

ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.

ಯೆಹೆಜ್ಕೇಲ 7:12

ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.

ಯೆಹೆಜ್ಕೇಲ 12:25

ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 18:3

ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.

ಯೋವೇಲ 2:1

ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.

ಸೆಫನ್ಯ 1:14

ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.

ಮಲಾಕಿ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 24:34

ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಯಾಕೋಬ 5:8

ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.

Interlinear

Choose Theme