Home Bibles ☰ Books ಯೆಹೆಜ್ಕೇಲ 12:6 · ಕನ್ನಡ ಬೈಬಲ್
ಯೆಹೆಜ್ಕೇಲ 12:6 · ಕನ್ನಡ ಬೈಬಲ್

ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.

Cross references

1 ಸಮುವೇಲ 28:8

ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.

2 ಸಮುವೇಲ 15:30

ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.

2 ಅರಸುಗಳು 7:5

ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.

ಯೋಬ 24:17

ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.

ಯೆಶಾಯ 8:18

ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್‌ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.

ಯೆಶಾಯ 20:2

ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.

ಯೆಹೆಜ್ಕೇಲ 4:3

ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್‌ ಮನೆತನದ ಗುರುತಾಗಿರುವದು.

ಯೆಹೆಜ್ಕೇಲ 12:11

ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು.

ಯೆಹೆಜ್ಕೇಲ 24:24

ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.

ಜೆಕರ್ಯ 3:8

ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.

Interlinear

Choose Theme