Home Bibles ☰ Books ಯೆಹೆಜ್ಕೇಲ 13:20 · ಕನ್ನಡ ಬೈಬಲ್
ಯೆಹೆಜ್ಕೇಲ 13:20 · ಕನ್ನಡ ಬೈಬಲ್

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.

Cross references

ಯೆಹೆಜ್ಕೇಲ 13:8

ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 13:15

ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು

ಯೆಹೆಜ್ಕೇಲ 13:18

ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?

2 ತಿಮೋಥೆಯ 3:8

ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.

Interlinear

Choose Theme