ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
Cross references
ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.