ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
Cross references
ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.
ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.