ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.
Cross references
ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.