Home Bibles ☰ Books ಯೆಹೆಜ್ಕೇಲ 16:2 · ಕನ್ನಡ ಬೈಬಲ್
ಯೆಹೆಜ್ಕೇಲ 16:2 · ಕನ್ನಡ ಬೈಬಲ್

ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು.

Cross references

ಯೆಶಾಯ 58:1

ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.

ಯೆಹೆಜ್ಕೇಲ 8:9

ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.

ಯೆಹೆಜ್ಕೇಲ 20:4

ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.

ಯೆಹೆಜ್ಕೇಲ 22:2

ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.

ಯೆಹೆಜ್ಕೇಲ 23:36

ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.

ಯೆಹೆಜ್ಕೇಲ 33:7

ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.

ಹೊಶೇಯ 8:1

ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.

Interlinear

Choose Theme