Home Bibles ಯೆಹೆಜ್ಕೇಲ 16:28 · ಕನ್ನಡ ಬೈಬಲ್
ಯೆಹೆಜ್ಕೇಲ 16:28 · ಕನ್ನಡ ಬೈಬಲ್

ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.

Cross references

ನ್ಯಾಯಾಧಿಪತಿಗಳು 10:6

ಆದರೆ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.

2 ಅರಸುಗಳು 16:7

ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.

2 ಅರಸುಗಳು 16:10

ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.

2 ಅರಸುಗಳು 21:11

ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--

2 ದಿನವೃತ್ತಾಂತ 28:16

ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು.

2 ದಿನವೃತ್ತಾಂತ 28:20

ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.

2 ದಿನವೃತ್ತಾಂತ 28:23

ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.

ಯೆರೆಮಿಯ 2:18

ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?

ಯೆರೆಮಿಯ 2:36

ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.

ಯೆಹೆಜ್ಕೇಲ 23:5

ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,

ಯೆಹೆಜ್ಕೇಲ 23:12

ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು.

ಹೊಶೇಯ 10:6

ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್‌ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.

Interlinear

Choose Theme