Home Bibles ಯೆಹೆಜ್ಕೇಲ 16:29 · ಕನ್ನಡ ಬೈಬಲ್
ಯೆಹೆಜ್ಕೇಲ 16:29 · ಕನ್ನಡ ಬೈಬಲ್

ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್‌ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.

Cross references

ನ್ಯಾಯಾಧಿಪತಿಗಳು 2:12

ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.

2 ಅರಸುಗಳು 21:9

ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್‌ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.

ಯೆರೆಮಿಯ 3:1

ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.

ಯೆಹೆಜ್ಕೇಲ 13:14

ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.

ಯೆಹೆಜ್ಕೇಲ 23:14

ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ,

Interlinear

Choose Theme