Home Bibles ಯೆಹೆಜ್ಕೇಲ 16:31 · ಕನ್ನಡ ಬೈಬಲ್
ಯೆಹೆಜ್ಕೇಲ 16:31 · ಕನ್ನಡ ಬೈಬಲ್

ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;

Cross references

ಯೆಶಾಯ 52:3

ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.

ಯೆಹೆಜ್ಕೇಲ 16:24

ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.

ಯೆಹೆಜ್ಕೇಲ 16:33

ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.

ಯೆಹೆಜ್ಕೇಲ 16:39

ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.

ಯೆಹೆಜ್ಕೇಲ 20:29

ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.

ಹೊಶೇಯ 12:11

ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.

Interlinear

Choose Theme