ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
Cross references
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.
ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.