ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
Cross references
ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ
ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.